ಚಿಕ್ಕಮಗಳೂರು : ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಗರದ ಕತ್ರಿಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ದಂಟರಮಕ್ಕಿ ನಿವಾಸಿ ಜಗದೀಶ್ ಗಂಭೀರವಾಗಿ ಗಾಯಗೊಂಡ ಸೈಕಲ್ ಸವಾರ ಎಂದು ಗುರುತಿಸಲಾಗಿದ್ದು, ಲಾರಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಸವಾರನ ಎರಡು ಕಾಲುಗಳ ಮೇಲೆ ಹರಿದಿದ್ದು, ಸೈಕಲ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಸೈಕಲ್ ಸವಾರ ಜಗದೀಶ್ ಅವರನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









