ಚಿಕ್ಕಮಗಳೂರು : ಹುತಾತ್ಮ ಪೊಲೀಸರಿಗೆ ಪುಷ್ಪನಮನ-ಕೊರೊನಾದಿಂದ ಮೃತಪಟ್ಟ ಮಗಳನ್ನು ನೆನೆದು ಕಣ್ಣೀರಿಟ್ಟ ತಾಯಿ…

192

ಚಿಕ್ಕಮಗಳೂರು : ಇಂದು ರಾಜ್ಯಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಆರಚರಿಸಲಾಗುತ್ತಿದ್ದು, ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಲಾಗುತ್ತಿದೆ. ಅಲ್ಲದೇ ಇತ್ತೀಚೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟ ಪೊಲೀಸರಿಗೂ ಗೌರವ ಸಲ್ಲಿಸಲಾಗುತ್ತಿದ್ದು, ಅದರಂತೆ ಇಂದು ನಗರದ ರಾಮನಹಳ್ಳಿಯ ಡಿಎಆರ್ ಮೈದಾನದಲ್ಲಿ ಇತ್ತೀಚೆಗೆ ಹುತಾತ್ಮ ಪೊಲೀಸರ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ವೇಳೆ ಕೊರೊನಾ ಸೋಂಕಿನಿಂದ ಮೃತಪಟ್ಟ ಮಗಳನ್ನು ನೆನೆದು ತಾಯಿ ಕಣ್ಣೀರಿಟ್ಟಿರುವ ದೃಶ್ಯ ಎಲ್ಲರ ಮನಕಲುಕುವಂತಿತ್ತು.

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಶಕುಂತಲಾ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದರು. ಇಂದು ಪೊಲೀಸ್ ಹುತಾತ್ಮರ ದಿನವಾಗಿದ್ದರಿಂದ ನಗರದ ಡಿಎಆರ್ ಮೈದಾನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಂದಿನ ಕಾರ್ಯಕ್ರಮಕ್ಕೆ ಶಕುಂತಲಾ ಅವರ ತಾಯಿ ಕಮಲಮ್ಮ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಹುತಾತ್ಮ ಪೊಲೀಸರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ವೇಳೆ ಮಗಳನ್ನು ನೆನೆದು ಬಿಕ್ಕಿ-ಬಿಕ್ಕಿ ಅತ್ತಿದ್ದಾರೆ. ಮಗಳನ್ನು ನೆನೆದು ಕಣ್ಣೀರಿಟ್ಟ ಕಮಲಮ್ಮ ಅವರು ನಡೆದು ಹೋಗಿ ಪುಷ್ಪಾರ್ಚನೆ ಸಲ್ಲಿಸುವ ಸ್ಥತಿಯಲ್ಲಿ ಇಲ್ಲದೇ ಇದ್ದ ಕಾರಣ ಇಬ್ಬರು ಮಹಿಳಾ ಪೇದೆಗಳ ಸಹಾಯದೊಂದಿಗೆ ನಡೆದುಕೊಂಡು ಹೋಗಿ ಹುತಾತ್ಮ ಪೊಲೀಸರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.