ನವದೆಹಲಿ : ವಿದೇಶಕ್ಕೆ ರಫ್ತು ಆಗಬೇಕಿದ್ದ ಚೀನಾದ ವಿವೋ ಕಂಪನಿಯ 27 ಸಾವಿರ ಫೋನ್ ಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ವಿಭಾಗ ತಡೆ ಹಿಡಿದಿದೆ.
ಡಿವೈಸ್ ಮಾದರಿಗಳು ಮತ್ತು ಅವುಗಳ ಮೌಲ್ಯವನ್ನು ತಪ್ಪಾಗಿ ಘೋಷಿಸಿದ ಆರೋಪದ ಹಿನ್ನೆಲೆಯಲ್ಲಿ ಡಿ.2 ರಿಂದ ಸುಮಾರು ಒಟ್ಟು 15 ದಶಲಕ್ಷ ಡಾಲರ್(123.73 ಕೋಟಿ ರೂ.)ಮೌಲ್ಯದ ಸರಕನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ತಡೆ ಹಿಡಿದ ಪ್ರಕರಣದ ಬಗ್ಗೆ ಹಣಕಾಸು ಸಚಿವಾಲಯ ಮತ್ತು ವಿವೋ ಕಂಪನಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ವಿವೋ ಮೊದಲ ಬಾರಿಗೆ ಭಾರತ-ನಿರ್ಮಿತ ಸ್ಮಾರ್ಟ್ಫೋನ್ ಗಳನ್ನು ನವೆಂಬರ್ ಆರಂಭದಲ್ಲಿ ಸೌದಿ ಅರೇಬಿಯಾ ಮತ್ತು ಥೈಲ್ಯಾಂಡ್ ಮಾರುಕಟ್ಟೆಗಳಿಗೆ ರಫ್ತು ಮಾಡಿತ್ತು. ವಿವೋ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.










