ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ; ಶಶಿಕಲಾ ಜೊಲ್ಲೆ ವಿರುದ್ಧ ಕೇಸ್ ದಾಖಲು…

141
firstsuddi

ಚಿಕ್ಕೋಡಿ : ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಶಶಿಕಲಾ ಜೊಲ್ಲೆ ಆಪ್ತರಾಗಿದ್ದ ರಣರಾಗಿಣಿ ಎಂಬುವರು ಅರಿಶಿನ- ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು. ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ನಂತರ ನೂರಾರು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದಾರೆ.

ಮಹಿಳಾ ಮಂಡಳದ ಅಧ್ಯಕ್ಷೆ ರಣರಾಗಿಣಿ ಎ1 ಆರೋಪಿ, ಶಶಿಕಲಾ ಜೊಲ್ಲೆ ಎ2 ಆರೋಪಿ ಎಂದು ಐಪಿಸಿ ಸೆಕ್ಷನ್ 1860ರ ಅಡಿ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.