ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ…

66
firstsuddi

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’ಯನ್ನು ಇಂದು ಬಿಡುಗಡೆ ಮಾಡಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಸಚಿವ ಡಾ. ಸುಧಾಕರ್ ಸೇರಿದಂತೆ ಪ್ರಮುಖ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಪ್ರಣಾಳಿಕೆ ಬಿಡುಗಡೆಗೂ ಮುನ್ನ ಮಾತನಾಡಿದ ಸಚಿವ ಡಾ. ಸುಧಾಕರ್ , 179 ಕ್ಷೇತ್ರದಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. 6 ಲಕ್ಷ ಸಲಹೆ ಬಂದಿದೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧತಾ ಸಭೆಯಲ್ಲಿ ಭಾಗಿಯಾಗಿದ್ದರು. 900 ಸಲಹೆಗಳು ತಜ್ಞರಿಂದ ಬಂದಿದೆ. ಬೇರೆಯವರ ರೀತಿ ನಾವು ಸುಳ್ಳು ಭರವಸೆ ನೀಡೋದಿಲ್ಲ. ನಮ್ಮ ಭರವಸೆ ಮೇಲೆ ಜನರಿಗೆ ನಂಬಿಕೆ ಇದೆ. ಕಾಂಗ್ರೆಸ್ 13 ರಾಜ್ಯಗಳಲ್ಲಿ ಇದೇ ರೀತಿ ಭರವಸೆ ನೀಡಿದ್ರು ಅವರ ಭರವಸೆ ಜನ ನಂಬೋದಿಲ್ಲ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಕೆಲ ದಿನ ಮಹಾರಾಷ್ಟ್ರ ಇಲ್ಲಿ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಹೇಳಿದರು.

ಬಿಜೆಪಿಯ ಭರವಸೆಗಳು ಇಂತಿದೆ:
• ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ
• ಪೋಷಣಾ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಅರ್ಧ ಲೀ. ನಂದಿನಿ ಹಾಲು
• ಪ್ರತೀ ಕುಟುಂಬಕ್ಕೆ ಪಡಿತರದಲ್ಲಿ 5 ಕೆಜಿ ಸಿರಿಧಾನ್ಯ
• ಬಿಪಿಎಲ್ ಕುಟುಂಬಕ್ಕೆ ಯುಗಾದಿ, ದೀಪಾವಳಿ, ಗಣೇಶ ಹಬ್ಬಕ್ಕೆ 3 ಉಚಿತ ಸಿಲಿಂಡರ್
• ವಿಶ್ವೇಶ್ವರಯ್ಯ ವಿದ್ಯಾಯೋಜನೆಯಡಿ ಸರ್ಕಾರಿ ಶಾಲೆಗಳ ಉನ್ನತೀಕರಣ
• ಏಕ ನಾಗರೀಕ ಸಂಹಿತೆ ಜಾರಿಗೆ ಭರವಸೆ
• ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ಸೌಲಭ್ಯ
• ಒನಕೆ ಓಬವ್ವ ಯೋಜನೆಯಡಿ 10 ಸಾವಿರ ರೂಪಾಯಿ, 5 ವರ್ಷದ ಭವಿಷ್ಯ ನಿಧಿ
• ಎಸ್‌ಸಿ ಎಸ್‌ಟಿ ಮಹಿಳೆಯರಿಗೆ 10 ಸಾವಿರ ಠೇವಣಿ.