ಚೆಕ್ ಬೌನ್ಸ್ ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ…

55
firstsuddi

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ್ ಎಂಬುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ನಂತರ ಹಣ ಕೊಡದೇ ವಂಚಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ.