ಜಂಟಿ ಶೋಧ ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಭಯೋತ್ಪಾದಕರು.

36

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಜಂಟಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಸಿಬ್ಬಂದಿ ಮತ್ತು ಜಮ್ಮು ಹಾಗೂ ಕಾಶ್ಮೀರ ಪೊಲೀಸರು 3 ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಖೈಮೋಹ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 13, 18 ಮತ್ತು 39 ಯುಎಪಿಎ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಹಾಗೂ ಕಾಶ್ಮೀರ ಪೊಲೀಸರು, 1ಆರ್‍ಆರ್ ಸೇನೆ, ಸಿಆರ್‍ಪಿಎಫ್ 18 ಬೆಟಾಲಿಯನ್ ಜೊತೆ ಸೇರಿ ಕುಲ್ಗಾಮ್‍ನಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ ಜೊತೆಗೆ ಸಂಬಂಧ ಹೊಂದಿರುವ 3 ಮಂದಿ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಮಕ್ಸೂದ್ ಅಹ್ಮದ್ ಭಟ್, ಉಬೈದ್ ಖುರ್ಷೀದ್ ಮಿರ್ ಹಾಗೂ ಉಮರ್ ಬಶೀರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಥೋಕರ್ಪೋರಾ ಖೈಮೋಹ್ ನಿವಾಸಿಗಳು. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.