ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ- ಸಚಿವ ನಿತಿನ್ ಗಡ್ಕೆರಿ…

94
firstsuddi

ನವದೆಹಲಿ : ಜನವರಿ 1 ರಿಂದ ಎಲ್ಲಾ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕೆರಿ ಅವರು ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಯಾಣಿಕರಿಗೆ ಫಾಸ್ಟ್ ಟ್ಯಾಗ್ ಉಪಯುಕ್ತವಾಗಲಿದೆ. ಫಾಸ್ಟ್ ಟ್ಯಾಗ್ ಗಳನ್ನು ಕಡ್ಡಾಯಗೊಳಿಸುವುದರಿಂದ ಟೋಲ್ ಪ್ಲಾಜಾಗಳಲ್ಲಿ ಹಣವನ್ನು ಕಟ್ಟಲು ವಾಹನಗಳನ್ನು ಹೆಚ್ಚು ನಿಲ್ಲಿಸುವ ಅಗತ್ಯವಿರುವುದಿಲ್ಲ. ಅಲ್ಲದೇ ಇದು ಸಮಯ ಹಾಗೂ ಇಂಧನ ಉಳಿಸಲು ಸಹಾಯಕಾರಿಯಾಗುತ್ತದೆ ಎಂದು ತಿಳಿಸಿದರು.
2016ರಲ್ಲಿ ಫಾಸ್ಟ್ ಟ್ಯಾಗ್ ಅನ್ನು ಆರಂಭಿಸಲಾಗಿದ್ದು, ಆ ಸಂದರ್ಭದಲ್ಲಿ ನಾಲ್ಕು ಬ್ಯಾಂಕುಗಳು ಒಟ್ಟಾಗಿ ಒಂದು ಲಕ್ಷಕ್ಕೂ ಹೆಚ್ಚು ಫಾಸ್ಟ್ ಟ್ಯಾಗ್ ಅನ್ನು ನೀಡಿದ್ದವು. 2017ರಲ್ಲಿ ಅದು 7 ಲಕ್ಷಕ್ಕೆ ಏರಿಕೆ ಕಂಡಿತ್ತು. ಬಳಿಕ 2017ರ ಡಿಸೆಂಬರ್ 1ರಿಂದ ಹೊಸ 4 ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ವಾಹನ ಉತ್ಪಾದನೆ ಕಂಪನಿಗಳು ಅಥವಾ ಡೀಲರ್ ಗಳು ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ನೀಡಬೇಕು ಎಂದು ಸಾರಿಗೆ ಸಚಿವಾಲಯ ಸೂಚಿಸಿದೆ.