ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಆರಂಭ…

86
firstsuddi

ನವದೆಹಲಿ : ಭಾರತದಲ್ಲಿ ಗಣರಾಜ್ಯೋತ್ಸವನ್ನು ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುತ್ತದೆ. ಆದರೆ ಈಗ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 23 ಜನವರಿ 1897 ರಂದು ಜನಿಸಿದರು. ಈ ಹಿಂದೆ ಸರ್ಕಾರವು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲು ಪ್ರಾರಂಭಿಸಿತ್ತು. ಆದರೆ ಈಗ ಅವರ ಹುಟ್ಟಿದ ದಿನದಿಂದಲೇ ಗಣರಾಜ್ಯೋತ್ಸವ ಪ್ರಾರಂಭಿಸಲು ನಿರ್ಧರಿಸಿದೆ.

ದೇಶದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲು ಮತ್ತು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳಲ್ಲಿ ಇದೂ ಒಂದಾಗಿದೆ ಎಂದು ಮೂಲಗಳು ತಿಳಿಸಿವೆ.