ಜಮ್ಮು ಕಾಶ್ಮೀರ : ಓರ್ವ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ.

78
firstsuddi

ಶ್ರೀನಗರ : ಜಮ್ಮು ಕಾಶ್ಮಿರದ ಶೋಪಿಯಾನ್ ನಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಝೈನಾಪೊರಾದ ಚೆರ್ಮಾರ್ಗ್ ಎಂಬಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದರು. ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಯೋಧಪಡೆಗಳ ಜಂಟಿ ತಂಡವು ಸ್ಥಳವನ್ನು ಸಮೀಪಿಸುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಹೀಗಾಗಿ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.