ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ.

35

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ (Jammu and Kashmir Assembly Election) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಇಂದು ಶ್ರೀನಗರದ ಶೇರ್ ಇ ಪಾರ್ಕ್‍ನಲ್ಲಿ ಆಯೋಜಿಸಲಾಗಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬುಧವಾರ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಬಹುಭದ್ರತೆಯ ನಡುವೆ ಪ್ರಧಾನಿ ಮೋದಿ ಗುರುವಾರ ಶ್ರೀನಗರದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶ್ರೀನಗರದ ಶೇರ್ ಇ ಕಾಶ್ಮೀರ ಪಾರ್ಕ್‍ನಲ್ಲಿ (Sher-e-Kashmir Park) ರ‍್ಯಾಲಿ ನಡೆಯಲಿದ್ದು, ಪಕ್ಷದ 30 ಸಾವಿರ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸುವ ಸಾಧ್ಯತೆಯಿದೆ. ಬಿಜೆಪಿ ಪ್ರಚಾರದ ಭಾಗವಾಗಿ ಈ ರ್ಯಾಲಿ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. ಈ ಸಂಬಂಧ ಬಿಜೆಪಿ ನಾಯಕ ಅಲ್ತಾಫ್ ಠಾಕೂರ್(Altaf Thakur) ಮಾತನಾಡಿ, ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ, 19 ಅಭ್ಯರ್ಥಿಗಳನ್ನು ಭೇಟಿ ಮಾಡಲಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಲಿದೆ ಎಂದು ತಿಳಿಸಿದರು.