ಜಮ್ಮು-ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಪೊಲಿಸರು ಹುತಾತ್ಮ, ಮೂವರು ಉಗ್ರರು ಬಲಿ…

103
First Suddi

ಬುಡ್ಗಾಮ್ : : ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಪ್ರಾಣತೆತ್ತಿದ್ದಾರೆ.
ಇಂದು ಬುಡ್ಗಾಮ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ನಡೆದ ಎನ್‍ಕೌಂಟರ್ ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.