ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ.
ಇಂದು ಮಧ್ಯಾಹ್ನ 1.30ರ ನಂತರ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಆದರೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ತೀವ್ರತೆ 5.4 ರಷ್ಟಿದ್ದು, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೂಮಿಯ 6 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದ ಬಳಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.










