ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ದಾಳಿ, ಐವರು ಸಿ ಆರ್ ಪಿ ಎಫ್ ಯೋಧರು ಹುತಾತ್ಮ…

779
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಐವರು  ಸಿ ಆರ್ ಪಿ ಎಫ್ ಯೋಧರು ಹುತಾತ್ಮರಾಗಿದ್ದು, ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಐವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ದಾಳಿಗೆ ಪ್ರತಿದಾಳಿ ನಡೆಸಿದ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಇನ್ನೂ ಓರ್ವ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.