ಜಮ್ಮು ಕಾಶ್ಮೀರಾದಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ…

173
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಪಿಂಜೂರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಶೋಪಿಯಾನ್‍ನಲ್ಲಿ ಕಳೆದ 24 ಗಂಟೆಯಲ್ಲಿ 9 ಮಂದಿ ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.