ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ…

132
firstsuddi

ಶ್ರೀನಗರ : ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ನಿನ್ನೆ ಸಂಜೆ ಉಗ್ರರು ಅಡಗಿರುವ ಮಾಹಿತಿಯನ್ನು ತಿಳಿದ ಯೋಧರು ಕಾರ್ಯಾಚರಣೆ ಆರಂಭಿಸಿದ್ದು, ಇಂದು ನುಸುಕಿನ ಜಾವ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.