ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಿಧ್ರಾದಲ್ಲಿ ಅಡಗಿಕೊಂಡಿದ್ದ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಾಗ ಟ್ರಕ್ ನಲ್ಲಿ ಭಯೋತ್ಪಾದಕರು ಇದ್ದರು ಎಂದು ಜಮ್ಮು ಮತ್ತು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ. ಟ್ರಕ್ ನಲ್ಲಿದ್ದ ಮೂವರೂ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್ ಕೌಂಟರ್ ನಡೆದ ಸ್ಥಳದಿಂದ ಒಬ್ಬ ಭಯೋತ್ಪಾದಕನ ಶವವನ್ನು ಹೊರತೆಗೆಯಲಾಗಿದೆ.
ಬಸಂತ್ ಗಢ ಪ್ರದೇಶದಲ್ಲಿ ಸಿಲಿಂಡರ್ ಆಕಾರದ ಐಇಡಿ, 300-400 ಗ್ರಾಂ ಆರ್ ಡಿಎಕ್ಸ್, 7 7.62 ಎಂಎಂ ಕಾರ್ಟ್ರಿಡ್ಜ್ ಗಳು ಮತ್ತು 5 ಡಿಟೋನೇಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.










