ಜಾತಿ ಜನಗಣತಿ ವರದಿ ಜಾರಿಗೆ ತಂದೇ ತರುತ್ತೇವೆ: ಬಿ.ಕೆ ಹರಿಪ್ರಸಾದ್.

25

ನವದೆಹಲಿ: ಜಾತಿ ಜನಗಣತಿ ವರದಿ ಜಾರಿಗೆ ಕೆಲವು ಶಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದರೂ ನಾವು ವರದಿಯನ್ನು ಜಾರಿಗೆ ತಂದೇ ತರುತ್ತೇವೆ. ಕಾರಣ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜಾತಿ ಜನಗಣತಿ ವರದಿ ಜಾರಿಗೆ ಮತ್ತು ಸಂವಿಧಾನ ರಕ್ಷಣೆಗೆ ಬದ್ಧರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ವಕಿರ್ಂಗ್ ಕಮಿಟಿ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ‘ದಿ ಕಾಸ್ಟ್ ಸೆನ್ಸೆಸ್, ವೇಮೆನ್ ರೈಟ್ಸ್ ಅಂಡ್ ರೇಸರ್ವೇಶನ್ಸ್; ದಿ ಫಿಲ್ಲರ್ಸ್ ಆಫ್ ಸೋಶಿಯಲ್ ಜಸ್ಟಿಸ್’ 3ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ಜಾತಿ ವ್ಯವಸ್ಥೆಯಲ್ಲಿ ಶತಮಾನಗಳಿಂದ ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಎಲ್ಲಾ ರೀತಿಯಲ್ಲೂ ಫಲ ಉಣ್ಣುತ್ತಿರುವರಿಗೆ ಜಾತಿಜನಗಣತಿ ಬಗ್ಗೆ ಭಯವಾಗುತ್ತಿದೆ. ಅದಕ್ಕಾಗಿ ಜಾತಿಜನಗಣತಿ ಬಗ್ಗೆ ಮಾತನಾಡುವವರನ್ನು ‘ಇವರು ಸಮಾಜವನ್ನು ಒಡೆಯುತ್ತಿದ್ದಾರೆ’ ಎಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಈ ಅಡೆತಡೆಗಳ ನಡುವೆಯೂ ಜಾತಿಜನಗಣತಿ ವರದಿ ಜಾರಿಯಾಗಲೇಬೇಕು ಎಂದು ಆಗ್ರಹಿಸಿದರು.