ಜಾಮೀನು ಸಿಕ್ಕಿ ಹೊರಬರುತ್ತಿದ್ದಂತೆ ಮತ್ತೆ ಬಂಧನಕ್ಕೊಳಗಾದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ.

60
firtstsuddi

ಗುವಾಹಟಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಇಂದು ಜಾಮೀನು ಸಿಕ್ಕಿದ್ದು, ಇದರ ಬೆನ್ನಲ್ಲೇ ಮತ್ತೊಂದು ಕೇಸ್ ನಲ್ಲಿ ಅಸ್ಸಾಂ ಪೊಲೀಸರು ಅವರನ್ನ ಬಂಧಿಸಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಗುಜರಾತ್ ನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಅಸ್ಸಾಂನಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಅವರನ್ನ ಕಳೆದ ಬುಧವಾರ ತಡರಾತ್ರಿ ಅಸ್ಸಾಂ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರಿಗೆ ಜಾಮೀನು ಮಂಜೂರುಗೊಂಡಿತ್ತು. ಇದರ ಬೆನ್ನಲ್ಲೇ ಬರ್ಪೆಟಾ ಜಿಲ್ಲೆಯಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದ್ದು, ಹೀಗಾಗಿ ಅವರನ್ನ ಬಂಧನ ಮಾಡಲಾಗಿದೆ. ಆದರೆ ಯಾವ ಪ್ರಕರಣದಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂಬ ಮಾಹಿತಿ ಮಾತ್ರ ಹೊರಬಿದ್ದಿಲ್ಲ.

ಏಪ್ರಿಲ್ 18ರಂದು ಜಿಗ್ನೇಶ್ ಅವರು ಭಾರತದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು, ಗೋಡ್ಸೆಯನ್ನು ದೇವರಾಗಿ ಕಾಣುತ್ತಾರೆ ಹಾಗೂ ಪೂಜಿಸುತ್ತಾರೆ. ಕೋಮು ಗಲಭೆ ನಡೆದಿರುವ ಹಿಮ್ಮತ್ನಗರ, ಕಂಭಾತ್ ಹಾಗೂ ವೆರಾವಲ್ ನಲ್ಲಿ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಪ್ರಧಾನಿ ಏಪ್ರಿಲ್ 20ಕ್ಕೆ ಗುಜರಾತ್ ಗೆ ಭೇಟಿ ನೀಡಿದಾಗ ಆಗ್ರಹಿಸಬೇಕು ಎಂದು ಟ್ವೀಟ್ ಮಾಡಿದ್ದರು ಎಂದು ದೂರುದಾರ ಅನುಪ್ ಕುಮಾರ್ ಡೇ ತಿಳಿಸಿದ್ದರು.