ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತರು, ದೂರುದಾರರು ಪ್ರತ್ಯೇಕವಾಗಿ ದಾಖಲಿಸಿರುವ ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ನಿನ್ನೆ ಹೈಕೋರ್ಟ್ ಗೆ ಸಲ್ಲಿಕೆ ಮಾಡಿದೆ.
ಜುಲೈ 16ರಂದು ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಎಸ್ ಐಟಿ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿತ್ತು. ಇದಕ್ಕೆ ಸಮ್ಮತಿಸಿದ ಎಜಿ ಪ್ರಭುಲಿಂಗ ನಾವದಗಿ, ಸಂಪೂರ್ಣ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಜುಲೈ 19ರಂದು ಸಲ್ಲಿಸುತ್ತೇವೆಂದು ಪೀಠಕ್ಕೆ ತಿಳಿಸಿದ್ದರು. ಅದರಂತೆ ನಿನ್ನೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಇಂದು ಮತ್ತೆ ಅರ್ಜಿ ವಿಚಾರಣೆ ನಡೆಸಲಿರುವ ಹೈಕೋರ್ಟ್ ಯಾವ ಆದೇಶ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.










