ಜಾರ್ಖಂಡ್ ಮುಖ್ಯಮಂತ್ರಿ ಆಪ್ತನ ಮನೆ ಮೇಲೆ ಇಡಿ ದಾಳಿ…

47

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎಂದು ಹೇಳಲಾಗ್ತಿರುವ ಉದ್ಯಮಿ ಪ್ರೇಮ್ ಪ್ರಕಾಶ್ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ್ದು, ಎರಡು ಎಕೆ 47 ರೈಫಲ್ಸ್ ಅನ್ನು ವಶಕ್ಕೆ ಪಡೆದುಕೊಂಡಿದೆ.

100 ಕೋಟಿ ರೂ ಮೌಲ್ಯದ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಪ್ರೇಮ್ ಪ್ರಕಾಶ್ ಮನೆ ಮೇಲೆ ಈ ದಾಳಿ ನಡೆದಿದೆ. ಆದರೆ ಹಗರಣದ ಬಗ್ಗೆ ಪ್ರಕಾಶ್ ಅಥವಾ ಸೊರೇನ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್ಸಿಆರ್ ನ 20 ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ಇಡಿ ಮೂಲಗಳು ತಿಳಿಸಿವೆ.