ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ.

41

ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಮಂಗಳವಾರ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಗೆ ಕೀರ್ತಿ ತಂದ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.