ಜು.15ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್: ಕೇಂದ್ರದ ನಿರ್ಧಾರ…

49
firstsuddi

ನವದೆಹಲಿ : ಜುಲೈ15ರಿಂದ ಮುಂದಿನ 75 ದಿನಗಳ ಕಾಲ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಬೂಸ್ಟರ್ ಡೋಸ್ ನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅನುರಾಗ್ ಠಾಕೂರ್, ಜುಲೈ 15ರಿಂದ ಈ ಯೋಜನೆ ಜಾರಿಗೊಳ್ಳಲಿದ್ದು, ಈ ಸೌಲಭ್ಯ ಎಲ್ಲರಿಗೂ ಲಭ್ಯವಿರಲಿದ್ದು, ಸರ್ಕಾರಿ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಸಿಗಲಿದೆ ಎಂದಿದ್ದಾರೆ.