ಬೆಂಗಳೂರು : ರಾಜ್ಯಾದ್ಯಂತ ಜುಲೈ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತಷ್ಟು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಈ ಭಾಗದಲ್ಲಿ ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆಯಲ್ಲೂ ಸದ್ಯ ಮಳೆಯಾಗುತ್ತಿದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.










