ಬೆಂಗಳೂರು : ಈ ಬಾರಿ ಜುಲೈ 19 ಮತ್ತು ಜುಲೈ 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ ಮತ್ತು ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪ್ರಶ್ನೆ ಪತ್ರಿಕೆಗಳೂ ಕೂಡ ಬಹು ಆಯ್ಕೆ ಮಾದರಿಯಲ್ಲಿ ಇರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳಿವೆ. ಕಳೆದ ಬಾರಿ 6 ದಿನಗಳ ಪರೀಕ್ಷೆ ನಡೆಸಿದ್ದೆವು. ಈ ಬಾರಿ ಎರಡು ದಿನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮೂರು ವಿಷಯಗಳಿಗೆ ಒಂದು ಪರೀಕ್ಷೆ ಇರುತ್ತೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಒಂದು ದಿನ ನಡೆಯಲಿದೆ. ಈ ಪರೀಕ್ಷೆ ಜುಲೈ 19ರಂದು ನಡೆಯಲಿದೆ. ಉಳಿದ ಭಾಷ ವಿಷಯಗಳ ಪರೀಕ್ಷೆ ಜುಲೈ 22 ರಂದು ನಡೆಯಲಿದೆ ಎಂದು ತಿಳಿಸಿದರು.
ಬೆಳಗ್ಗೆ 10:30ರಿಂದ ಮಧ್ಯಾಹ 1:30 ವರೆಗೆ ಪರೀಕ್ಷೆಯನ್ನು ಅವಧಿಯನ್ನು ನಿಗದಿ ಮಾಡಲಾಗಿದೆ.










