ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ- ತಪ್ಪಿಸಿಕೊಳ್ಳುವ ಭರದಲ್ಲಿ ನದಿಗೆ ಹಾರಿ ವ್ಯಕ್ತಿ ಸಾವು…

69
firstsuddi

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ತೇರಿದೊಡ್ಡಿಯಲ್ಲಿನ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ವ್ಯಕ್ತಿಯೋರ್ವ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನದಿಗೆ ಹಾರಿ ಸಾವನ್ನಪ್ಪಿದ್ದಾನೆ.

ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜೂಜು ಅಡ್ಡೆ ಮೇಲೆ ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಮರಿಸ್ವಾಮಿ ನದಿಗೆ ಹಾರಿದ್ದ. ನದಿಯಲ್ಲಿ ಈಜಿ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ಮರಳಿ ಬಂದಿದ್ದರು. ಆದರೆ ಮೂರು ದಿನಗಳ ಬಳಿಕ ಮರಿಸ್ವಾಮಿ ಶವ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದೆ.

ಘಟನೆ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.