ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡ್ತಾರೆ : ಬಸವರಾಜ್ ಬೊಮ್ಮಾಯಿ.

72
firstsuddi

ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಸಭೆ ಮಾಡುತ್ತಿದ್ದಾರೆ. ಸಭೆಯ ಪೂರ್ವದಲ್ಲಿ ತಜ್ಞರ ವರದಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಸಿಎಂ ತೀರ್ಮಾನ ಮಾಡುತ್ತಾರೆ. ಲಾಕ್ ಡೌನ್ ಯಾವ ರೀತಿ ಇರಬೇಕು, ಏನೇನು ಇರಬೇಕು, ಏನೇನು ಇರಬಾರದು ಎಂಬುದರ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಮೂರನೆ ಅಲೆ ಎದುರಿಸಲು ಈಗಾಗಲೇ ಸರ್ಕಾರ ಸಜ್ಜಾಗ್ತಿದೆ. ಆಕ್ಸಿಜನ್ ಬೆಡ್ ಗಳು, ವೆಂಟಿಲೇಟರ್, ಐಸಿಯು ಹೆಚ್ಚು ಮಾಡ್ತಿದ್ದೇವೆ. ಪ್ರತಿಯೊಂದು ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕು ಅಂತಾ ನಿರ್ಧರಿಸಿ ಅದಕ್ಕೆ ಕ್ರಮ ತೆಗೆದುಕೊಳ್ತಿದ್ದೇವೆ. ಅಗತ್ಯಕ್ಕೆ ತಕ್ಕಂತೆ ರೆಮ್ ಡಿಸಿವಿರ್ ಇದೆ. ಮೂರನೆ ಅಲೆ ಹೆಚ್ಚಾಗಿ ಮಕ್ಕಳಿಗೆ ಬರೋದ್ರಿಂದ ಪ್ರತಿಯೊಂದು ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕ ಮಕ್ಕಳ ವಾರ್ಡ್ ಮಾಡ್ತಿದ್ದೇವೆ ಎಂದು ಹೇಳಿದರು.