ಹಾಸನ : ವಿಧಾನಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯಲ್ಲಿ ಎಚ್.ಡಿ.ರೇವಣ್ಣ ಅವರ ಪುತ್ರ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ.
1433 ಮತಗಳ ಅಂತರದಿಂದ ಸೂರಜ್ ರೇವಣ್ಣ ಗೆಲುವಿನ ನಗೆ ಬೀರಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ಶಂಕರ್ 731 ಮತಗಳನ ಪಡೆದು 2ನೇ ಸಾನಕ್ಕಿಳಿದರೆ, ಬಿಜೆಪಿ ಅಭ್ಯರ್ಥಿ ವಿಶ್ವನಾಥ್ 354 ಮತಪಡೆದು ಹೀನಾಯ ಸೋಲು ಕಂಡಿದ್ದಾರೆ.
ವಿಧಾನ ಪರಿಷತ್ ನ 25 ಕ್ಷೇತ್ರಗಳಿಗೆ ಡಿ.10ರಂದು ಮತದಾನ ನಡೆದಿತ್ತು. ಇಂದು ಮತಗಳ ಎಣಿಕೆ ನಡೆಯುತ್ತಿದ್ದು, ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದು, ದೇವೇಗೌಡರ ಮೊಮ್ಮಗ ವಿಧಾನಸೌಧವನ್ನು ಪ್ರವೇಶಿಸಿದ್ದಾರೆ.










