ಜೆಡಿಎಸ್ ಪಕ್ಷದವರು ಬಿಜೆಪಿ ಪಕ್ಷಕ್ಕೆ ಮತವನ್ನು ಹಾಕಿದ್ದಾರೆ : ಜಿ.ಟಿ. ದೇವೇಗೌಡ…

189
firstsuddi

ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ.ಟಿ. ದೇವೇಗೌಡ ಅವರು ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಬೇಕಾಗಿತ್ತು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜಿದ್ದಾಜಿದ್ದಿಯ ಚುನಾವಣೆಯನ್ನು ನಡೆಸಿದ್ದು, ಕಾಂಗ್ರೆಸ್ ಪಕ್ಷದವರು ಕಾಂಗ್ರೆಸ್‍ಗೆ ಮತ ಹಾಕಿದ್ದರೆ, ಜೆಡಿಎಸ್ ಪಕ್ಷದವರು ಬಿಜೆಪಿ ಪಕ್ಷಕ್ಕೆ ಮತವನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.