ಜೈಪುರ – ಅಜ್ಮೀರ್ ಹೈವೇಯಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ : ಐದು ಮಂದಿ ಸಜೀವ ದಹನ.

34

ಜೈಪುರ: ಜೈಪುರ- ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಸಾಯನಿಕ ಟ್ರಕ್‍ವೊಂದು ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಜೀವಂತ ಸಮಾಧಿಯಾಗಿದ್ದು, 37 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ಘಟನೆಯಲ್ಲಿ ಸುಮಾರು 30 ಟ್ರಕ್ ಮತ್ತು ಇತರ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ತಿಳಿಸಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆ ರಾಜಸ್ಥಾನ ಮುಖ್ಯಮಂತ್ರಿ ಭಜನ್‍ಲಾಲ್ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಈ ಬಗ್ಗೆ ಸಮಾಲೋಚಿಸಿದ ಸಿಎಂ, ಉತ್ತಮ ಚಿಕಿತ್ಸೆ ಭರವಸೆ ನೀಡುವಂತೆ ಸೂಚನೆ ನೀಡಿದರು. ಇದಾದ ಬಳಿಕ ಅವರು ಅಪಘಾತ ನಡೆದ ಸ್ಥಳಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಮಾಡಿರುವ ಅವರು, ಜೈಪುರ- ಅಜ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಅಗ್ನಿ ಅನಾಹುತದ ಸುದ್ದಿ ಕೇಳಿ ದುಃಖವಾಯಿತು. ಈ ಮಾಹಿತಿ ದೊರೆತ ಕೂಡಲೇ ನಾನು ಎಸ್‍ಎಂಎಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳಿಗೆ ತಕ್ಷಣಕ್ಕೆ ಅಗತ್ಯ ವೈದ್ಯಕೀಯ ಸೌಲಭ್ಯ ಮತ್ತು ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯ ಸಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.