ಜೋಶಿ ಅವರ ರೀತಿ ಒಲೈಕೆ ರಾಜಕಾರಣ ಮಾಡಲ್ಲ. ಮೊದಲು ನಾನೊಬ್ಬ ಭಾರತೀಯ. ನಂತರ ರಾಜಕಾರಣಿ: ಜಮೀರ್ ಖಾನ್.

35

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್ ಖಾನ್ ಅವರು ಜೋಶಿ ಅವರ ರೀತಿ ಒಲೈಕೆ ರಾಜಕಾರಣ ಮಾಡಲ್ಲ. ಮೊದಲು ನಾನೊಬ್ಬ ಭಾರತೀಯ. ನಂತರ ರಾಜಕಾರಣಿ. ನನಗೆ ಎಲ್ಲಾ ಜನಾಂಗದವರು ಬೇಕು. ಯಾವುದೇ ಕಾರಣಕ್ಕೂ ಜಾತಿ ರಾಜಕಾರಣ ಮಾಡುತ್ತಿಲ್ಲ , ಪ್ರಲ್ಹಾದ ಜೋಶಿ ಅವರಿಗೆ ಹಿಂದೂ, ಮುಸ್ಲಿಂ ಬಗ್ಗೆ ಮಾತನಾಡುವುದು ಬಿಟ್ಟು ಬೇರೆ ಗೊತ್ತಿಲ್ಲ. ನನ್ನನ್ನ ಸಂಪುಟದಿಂದ ಕಿತ್ತು ಹಾಕಲು ಸಾಧ್ಯವಿಲ್ಲ’ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿರುಗೇಟು ನೀಡಿದರು.
ಭಾರತದಲ್ಲಿ ಇರುವವರೆಲ್ಲರೂ ಭಾರತೀಯರು. ಪ್ರಲ್ಹಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಮನೆಯಲ್ಲಿ ಮಾಡಿಕೊಳ್ಳಲಿ ಎಂದು ಹೇಳಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧ ಮಾಡುತ್ತಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು. ಇಲ್ಲದಿದ್ದರೆ ಈ ರೀತಿ ಮಾತನಾಡುತ್ತಾರೆ ಎಂದರು. ರೈತರು ಅನ್ನದಾತರು. ಅವರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾನೂನು ಇದ್ದು ಯಾರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಬರುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವಿಷಯವನ್ನು ಬಿಜೆಪಿಯವರು ಮುನ್ನೆಲೆಗೆ ತಂದಿದ್ದಾರೆ, ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.