ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಇಂದು ಮಹತ್ವದ ತೀರ್ಪು ಪ್ರಕಟಿಸಿದ ವಾರಣಾಸಿ ಜಿಲ್ಲಾ ನ್ಯಾಯಾಲಯವು ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಐವರು ಮಹಿಳೆಯರ ಅರ್ಜಿಯನ್ನು ಪುರಸ್ಕರಿಸಿದೆ.
ಜ್ಞಾನವಾಪಿ ಮಸೀದಿಯಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಐವರು ಹಿಂದೂ ಮಹಿಳೆಯರು ವಾರಣಾಸಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12ಕ್ಕೆ ಕಾಯ್ದಿರಿಸಿದ್ದರು.
ಅರ್ಜಿ ವಿಚಾರಣೆಗೆ ಯೋಗ್ಯವೋ ಅಲ್ಲವೋ ಎಂಬ ಬಗ್ಗೆ ಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ. ಈ ಮೂಲಕ, ಮುಸ್ಲಿ ಅರ್ಜಿದಾರರಿಗೆ ಭಾರೀ ಹಿನ್ನೆಡೆಯಾಗಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.










