ಜ್ಞಾನವಾಪಿ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ – ಪ್ರಾಧ್ಯಾಪಕನ ಬಂಧನ…

50
firstsuddi

ನವದೆಹಲಿ : ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕನನ್ನು ನಿನ್ನೆ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ರತನ್ ಲಾಲ್ ವಿರುದ್ಧ ಉತ್ತರ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾರ್ಮಿಕ ಭಾವನೆಗಳನ್ನು ಉದ್ರೇಕಿಸುವುದು) ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.

ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್ ಲಾಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಇತ್ತೀಚೆಗಷ್ಟೇ ರತನ್ ಲಾಲ್ ಶಿವಲಿಂಗದ ಬಗ್ಗೆ ಅವಹೇಳನಕಾರಿ, ಪ್ರಚೋದಿಸುವ ಮತ್ತು ಪ್ರಚೋದನಕಾರಿ ಟ್ವೀಟ್ ನನ್ನು ಪೋಸ್ಟ್ ಮಾಡಿರುವುದನ್ನು ವಿನೀತ್ ಜಿಂದಾಲ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು. ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಈ ವಿಷಯ ಕುರಿತಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಮ್ಮ ದೂರಿನಲ್ಲಿ ವಕೀಲರು ತಿಳಿಸಿದ್ದರು.