ಟಂಟಂ ವಾಹನ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರ ಸಾವು-ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ…

397
firstsuddi

ವಿಜಯಪುರ : ಟಂಟಂ ವಾಹನ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಟಂಟಂನಲ್ಲಿದ್ದ ನಾಲ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ನಡೆದಿದೆ. ಪೊಲೀಸರಿಂದ ದಂಡ ಹಾಕುವುದನ್ನು ತಪ್ಪಿಸಿಕೊಳ್ಳಲು ಟಂಟಂ ವಾಹನದ ಚಾಲಕ ವೇಗವಾಗಿ ಚಾಲನೆ ಮಾಡಿದ ಪರಿಣಾಮ ಎದುರಿಗೆ ಬಂದ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಟಂಟಂ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಈ ಘಟನೆ ಸಂಭವಿಸಿದೆ ಎಂದು  ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಹಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.