ಟವೇರಾ ವಾಹನಕ್ಕೆ ಲಾರಿ ಡಿಕ್ಕಿ – ಇಬ್ಬರು ಕ್ರೀಡಾಪಟುಗಳು ಸಾವು…

102
Firstsuddi

ವಿಜಯಪುರ : ಟವೇರಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.

ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರದ ಬಾರಾಮಟ್ಟಿ ಜಿಲ್ಲೆಯ ಎಂಟು ಕ್ರೀಡಾ ಪಟುಗಳು ಟವೇರಾ ವಾಹನದಲ್ಲಿ ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಬಂದ ಲಾರಿ ಡಿಕ್ಕಿಯಾಗಿ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟರೆ, ಆರು ಜನ ಕ್ರೀಡಾಪಟುಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.