ಹೈದರಾಬಾದ್ : ಟಾಲಿವುಡ್ ನಟ ಸಾಯಿಧರಂ ತೇಜ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ. ಸಾಯಿ ಧರಂ ತೇಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಎಲ್ಲ ಅಂಗಾಂಗಗಳೂ ಸರಿಯಾಗಿ ಕೆಲಸ ಮಾಡುತ್ತಿವೆ ಎಂದು ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯಕ್ಕೆ ಸಾಯಿ ಧರಂತೇಜ್ ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿನಪೂರ್ತಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ನಟ ಚಿರಂಜೀವಿ, ವೈದ್ಯರು ತಿಳಿಸಿರುವಂತೆ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರಿದಿದೆ. ಮುಂದಿನ ಕೆಲ ದಿನಗಳಲ್ಲಿ ಆತ ಸಹಜ ಸ್ಥಿತಿಗೆ ಮರಳುತ್ತಾನೆ ಎಂದು ತಿಳಿಸಿದ್ದಾರೆ.










