ಟಿಕೆಟ್ ಸಿಗದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ : ಪ್ರಮೋದ್ ಮುತಾಲಿಕ್.

170
Firstsuddi

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ನಾನು ಕೂಡ ಆಕಾಂಕ್ಷಿಯಾಗಿದ್ದೇನೆ. ಬೈ ಎಲೆಕ್ಷನ್ ನಲ್ಲಿ ಟಿಕೆಟ್ ಸಿಗದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆಯೋ ಅವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ಬಿಜೆಪಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದೇನೆ. ಎಲ್ಲರೂ ಸಹ ಕೋರ್ ಕಮಿಟಿ ಯಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಶೇಕಡ 90ರಷ್ಟು ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಟಿಕೆಟ್ ವಿಚಾರವಾಗಿ ರಾಜಕೀಯ ಬೆಳವಣಿಗೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.