ಟಿಪ್ಪರ್, ಕಾರು ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ-ನಾಲ್ವರು ಸಜೀವ ದಹನ…

186
firstsuddi

ಹೈದರಾಬಾದ್ : ಟಿಪ್ಪರ್ ಲಾರಿಗೆ ಟಾಟಾ ಸುಮೋ ಹಾಗೂ ಕಾರು ಡಿಕ್ಕಿ ಹೊಡೆದು ನಾಲ್ವರು ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕಡಾ ಜಿಲ್ಲೆಯ ವಲ್ಲೂರು ತಾಲ್ಲೂಕಿನ ಗೋಟೂರು ಗ್ರಾಮದಲ್ಲಿ ನಡೆದಿದೆ. ಟಿಪ್ಪರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಟಾಟಾ ಸುಮೋದಲ್ಲಿದ್ದ ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಡಪ ರಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿಯ ಕನ್ನಾಲೆಗೆ 3 ವಾಹನಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಘಟನಾ ಸ್ಥಳಕ್ಕೆ ಕಡಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.