ಟಿಪ್ಪರ್ ಹರಿದು ಮನೆ ಮುಂದೆ ಆಟವಾಡ್ತಿದ್ದ ಮಗು ಸಾವು…

47
firstsuddi

ಬೆಳಗಾವಿ: ಟಿಪ್ಪರ್ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ.

ಅದ್ವೈತ್ ಅಕ್ಷಯ್ ನಾಶಿಪುಡಿ(4) ಮೃತ ಮಗು. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದಾಗ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮಗು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದೆ. ಅಪಘಾತದ ಬಳಿಕ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಇನ್ನೂ ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.