ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ : ಶರತ್ ಬಚ್ಚೇಗೌಡ.

215
firstsuddi

ಬೆಂಗಳೂರು : ಈ ಬಾರಿಯ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಬಿಜೆಪಿಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಅವರು ಹೇಳಿದ್ದಾರೆ. ಬಿ.ಎಸ್ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ಬಾರಿ ನನಗೆ ಟಿಪ್ಪು ಜಯಂತಿಯನ್ನು ಆಚರಣೆ ಮಾಡದಂತೆ ಬಹಳಷ್ಟು ಜನ ಹೇಳಿದ್ದರು. ಆದರೆ ಈ ಬಾರಿ ನಮ್ಮ ಊರಿನ ಪಕ್ಕದಲ್ಲಿರುವ ತಮ್ಮರಸನಹಳ್ಳಿಯಲ್ಲಿ ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಶರತ್ ಬಚ್ಚೇಗೌಡ ಅವರ ಈ ಹೇಳಿಕೆ ಸಾಕಷ್ಟು ಸುದ್ದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.