ಟೀಂ ಇಂಡಿಯಾದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ವಿಧಿವಶ…

86
firstsuddi

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ಅವರು ವಿಧಿವಶರಾಗಿದ್ದಾರೆ.

ಪ್ರಸಿದ್ಧ ಸ್ಪಿನ್ನರ್ ಆಗಿದ್ದ ಬಿಶನ್ ಸಿಂಗ್ ಬೇಡಿ (77) 1967 ಮತ್ತು 1979ರ ನಡುವೆ ಭಾರತಕ್ಕಾಗಿ 67 ಟೆಸ್ಟ್ ಪಂದ್ಯವಾಡಿ 266 ವಿಕೆಟ್ ಪಡೆದಿದ್ದಾರೆ. ತಮ್ಮ 12 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 10 ಏಕದಿನ ಅಂತರರಾಷ್ಟ್ರೀಯ ಪಂದ್ಯವಾಡಿ 7 ವಿಕೆಟ್‌ಗಳನ್ನು ಪಡೆದಿದ್ದಾರೆ.

ಅಮೃತಸರದಲ್ಲಿ 1946ರ ಸೆಪ್ಟೆಂಬರ್ 25 ರಂದು ಜನಿಸಿದ ಬೇಡಿ ಭಾರತದ ಮೊದಲ ಏಕದಿನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 370 ಪ್ರಥಮ ದರ್ಜೆ ಪಂದ್ಯಗಳಲ್ಲಿ 1,560 ವಿಕೆಟ್ ಪಡೆದಿದ್ದಾರೆ. ದೇಶೀಯ ಲೀಗ್‌ನಲ್ಲಿ ದೆಹಲಿ ಪರ ಸಿಂಗ್ ಆಡಿದ್ದರು.

ಗಾಯಗೊಂಡಿದ್ದ ಅಜಿತ್ ವಾಡೇಕರ್ ಅನುಪಸ್ಥಿತಿಯಲ್ಲಿ ಅವರು ತಂಡದ ನಾಯಕತ್ವ ವಹಿಸಿದ್ದಾಗ ಇಂಗ್ಲೆಂಡ್ ವಿರುದ್ಧದ 1971 ರ ಭಾರತ ಐತಿಹಾಸಿಕ ಸರಣಿ ಜಯ ದಾಖಲಿಸಿತ್ತು.