ಟೆಂಪೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ-ಸ್ಥಳದಲ್ಲೇ ನಾಲ್ವರ ಸಾವು…

166
firstsuddi

ಧಾರವಾಡ : ಟೆಂಪೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊರವಲಯದ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ರುದ್ರಪ್ಪ ಮರಕುರಿ(65), ಈರಮ್ಮ ಮರಕುರಿ(55), ಮಂಜುನಾಥ ಮರಕುರಿ(35) ಹಾಗೂ ಶಿವರಾಜ ಅಳವಂಡಿ(2) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಕಾರಿನಲ್ಲಿ ಒಟ್ಟು ಆರು ಮಂದಿ ಕೊಪ್ಪಳದಿಂದ ಬೆಳಗಾವಿಗೆ ಹೋಗುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟೆಂಪೋ ಯರಿಕೊಪ್ಪ ಬೈಪಾಸ್ ಬಳಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಮಮತಾ ಹಾಗೂ ಸಾನ್ವಿ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.