ಟೈರ್ ಸ್ಪೋಟಗೊಂಡು ಆಟೋ ಸಮೇತ ಬಾವಿಗೆ ಬಿದ್ದ ಬಸ್-21 ಮಂದಿ ದುರ್ಮರಣ…

365
firstsuddi

ಮುಂಬೈ : ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ರಸ್ತೆ ಬದಿಯ ಬಾವಿಗೆ ಬಿದ್ದು 21 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದಿದೆ. ಬಸ್ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು, ಬಸ್ ನಾಸಿಕ್ ಬಳಿ ತೆರಳುತ್ತಿದ್ದ ವೇಳೆ ಏಕಾಏಕಿ ಬಸ್ಸಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಸ್ ಹಾಗೂ ಆಟೋ ರಸ್ತೆ ಬದಿಯಲ್ಲಿದ್ದ ಬಾವಿಗೆ ಬಿದ್ದು 8ಮಂದಿ ಮಹಿಳೆಯರು ಸೇರಿದಂತೆ ಒಟ್ಟು 21 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 18 ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಹಾರಾಷ್ಟ್ರ ಸರ್ಕಾರ ತಲಾ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುತ್ತದೆ ಎಂದು ಭರವಸೆ ನೀಡಿದೆ.