ಟೋಕಿಯೋ ಒಲಿಂಪಿಕ್ಸ್ ಗ್ರಾಮದಲ್ಲಿ ಕೋವಿಡ್-19 ಮೊದಲ ಕೇಸ್ ಪತ್ತೆ!

105
firstsuddi

ಜಪಾನ್ :. ಟೋಕಿಯೋ ಒಲಿಂಪಿಕ್ಸ್ ಗೆ ಮತ್ತೆ ಕೊರೊನಾ ಕರಿನೆರಳು ಆವರಿಸಿದೆ. ಒಲಿಂಪಿಕ್ಸ್ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ಒಲಿಂಪಿಕ್ಸ್ -2020 ರ ಆಯೋಜಕರು ತಿಳಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020 ಜುಲೈ 23 ರಿಂದ ಆರಂಭವಾಗಲಿದೆ.

ಒಲಿಂಪಿಕ್ಸ್ ಗ್ರಾಮದಲ್ಲಿ ಸ್ಕ್ರೀನಿಂಗ್ ಮಾಡುವ ವೇಳೆ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಒಲಿಂಪಿಕ್ಸ್ ಆಯೋಜನಾ ಸಮಿತಿ ವಕ್ತಾರ ಮಾಸಾ ಟಕೇ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿ ಯಾರು ಎಂದು ಬಹಿರಂಗಪಡಿಸಿಲ್ಲ.