ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಆ್ಯಂಬುಲೆನ್ಸ್ ; ನಾಲ್ವರು ದಾರುಣ ಸಾವು…

67
firstsuddi

ಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ನಿನ್ನೆ ಸಂಭವಿಸಿದೆ.

ಶಿರೂರು ಟೋಲ್ ಪ್ಲಾಝಾ ಬಳಿಗೆ ಬರುತ್ತಿದ್ದಂತೆಯೇ ಟೋಲ್ ಗೇಟ್ ಸಿಬ್ಬಂದಿಯನ್ನು ತಪ್ಪಿಸಲು ಹೋಗಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮೃತಟ್ಟಿದ್ದಾರೆ. ಆ್ಯಂಬುಲೆನ್ಸ್ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.