ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರು – ಗೃಹರಕ್ಷಕ ದಳದ ಸಿಬ್ಬಂದಿಗೆ ಗಂಭೀರ ಗಾಯ…

77
firstsuddi

ಉಡುಪಿ : ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಮುಲ್ಕಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಜಿ ರಾಕೇಶ್ (27) ಗಂಭೀರವಾಗಿ ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿ.

ರಾತ್ರಿ ಪಾಳಿಯ ಕೆಲಸ ಮುಗಿಸಿ ಕಾರಿನಲ್ಲಿ ಜಿಲ್ಲೆಯತ್ತ ಹಿಂದಿರುಗುತ್ತಿದ್ದ ರಾಕೇಶ್, ಇಂದು ಮುಂಜಾನೆ 5.30 ರ ಸಮಯದಲ್ಲಿ ಉದ್ಯಾವರದ ಬಳಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ರಾಕೇಶ್ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.