ರಾಜಸ್ಥಾನ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ನಡೆದಿದೆ.ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಟೊಂಕ್ ಡಿಜಿಪಿ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.










