ಆಗ್ರಾ : ಟ್ರಕ್ – ಸ್ಕಾರ್ಪಿಯೋ ಮಧ್ಯೆ ಡಿಕ್ಕಿ ಸಂಭವಿಸಿ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಗ್ರಾದ ಎಟ್ಮೌದ್ದೌಲ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಗ್ಗೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟರೆ, ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ ಸ್ಕಾರ್ಪಿಯೋದಲ್ಲಿ 12 ಜನರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಅಪಘಾತಕ್ಕೀಡಾದ ಸ್ಕಾರ್ಪಿಯೋ ವಾಹನ ಜಾರ್ಖಂಡ್ ನೋಂದಾಯಿಸಲಾಗಿದ್ದ ವಾಹನವಾಗಿದೆ ಎಂದು ತಿಳಿದುಬಂದಿದೆ.










