ಅಸ್ಸಾಂ: ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಗೋಲಾಘಾಟ್ ಜಿಲ್ಲೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತ ಬಸ್ ಗೋಲಾಘಾಟ್ ಜಿಲ್ಲೆಯ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಲಿಜನ್ ಎಂಬ ಪ್ರದೇಶದಲ್ಲಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗೋಲಾಘಾಟ್ ಎಸ್‌ಪಿ ರಾಜೇನ್ ಸಿಂಗ್ ಅವರು ತಿಳಿಸಿದ್ದಾರೆ.










