ಟ್ರಕ್‍ಗೆ ಬಸ್ ಡಿಕ್ಕಿ- 13 ಮಂದಿ ಸಜೀವ ದಹನ…

59
firstsuddi

ಭೋಪಾಲ್: ಬಸ್ಸೊಂದು ಟ್ರಕ್‍ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 13 ಮಂದಿ ಸಜೀವ ದಹನವಾಗಿರುವಂತಹ ಘಟನೆ ಮಧ್ಯಪ್ರದೇಶದ ಗುನ ಹಾಗೂ ಅರೋನ್ ನಡುವಿನ ರಸ್ತೆಯಲ್ಲಿ ನಡೆದಿದೆ.

ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಟ್ರಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಸ್ ಗುನಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಅರೋನ್‍ಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ಘೋಷಣೆ ಮಾಡಲಾಗಿದೆ. ಅಪಘಾತಕ್ಕೆ ಕಾರಣ ಹಾಗೂ ಬಸ್‍ನ ದಾಖಲೆಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.